Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:1 - ಕನ್ನಡ ಸತ್ಯವೇದವು C.L. Bible (BSI)

1 ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ ನನ್ನ ಆತ್ಮವು ನಿನ್ನನ್ನು ಬಯಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:1
21 ತಿಳಿವುಗಳ ಹೋಲಿಕೆ  

ಬಾಯ್ದೆರೆದು ಹಾತೊರೆಯುತಿರುವೆ I ನಿನ್ನ ಆಜ್ಞೆಗಳನು ಅರಸುತಿರುವೆ II


ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ I ಸರ್ವೇಶ್ವರನಿಗೆ ಜಯಜಯ ಘೋಷ ಮಾಡಿರಿ II


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II


ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ವ್ಯಕ್ತಿಗಳೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.


ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು.


ಆ ಪಂಗಡದವರೆಲ್ಲರು ಸತ್ತರು. ಆದರೆ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.


ಕೋರಹನ ಮಕ್ಕಳು - ಅಸ್ಸೀರ್, ಎಲ್ಕಾನಾ ಮತ್ತು ಅಬಿಯಾಸಾಫ್. ಇವರೇ ಕೋರಹೀಯರ ಗೋತ್ರಸ್ಥಾಪಕರು.


ಕೆಹಾತನ ಸಂತತಿಯವರು: ಅಮ್ಮೀನಾದಾಬ್, ಕೋರಹ, ಅಸ್ಸೀರ್,


ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II


ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು