Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:11 - ಕನ್ನಡ ಸತ್ಯವೇದವು C.L. Bible (BSI)

11 ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:11
9 ತಿಳಿವುಗಳ ಹೋಲಿಕೆ  

ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II


ಅನ್ಯಜನರು ನುಡಿಯುವುದೆಂತು : I “ಅವರ ದೇವರೆಲ್ಲಿ?” ಎಂದು II


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು