Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:4 - ಕನ್ನಡ ಸತ್ಯವೇದವು C.L. Bible (BSI)

4 ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಭಜನೋತ್ಸವದಲ್ಲಿ ಸೇರಿ ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ ಸ್ತೋತ್ರಪದಗಳನ್ನು ಹಾಡುತ್ತಾ ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:4
28 ತಿಳಿವುಗಳ ಹೋಲಿಕೆ  

ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II


ತೆರಳಲಿಲ್ಲವೆ ನಾವೀರ್ವರು ದೇವಾಲಯಕೆ I ಭಕ್ತರೊಂದಿಗೆ ಮಧುರ ಸಂಭಾಷಣೆಯೊಂದಿಗೆ? II


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.


ಕಳೆದುಹೋದ ದಿನಗಳಲಿ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತಲ್ಲವೆ! ಆಗ ದೇವರು ನನ್ನನ್ನು ಕಾಪಾಡುತ್ತಿದ್ದನಲ್ಲವೆ?


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.


ಸಿರಿವಂತಳಾಗಿ ಇಲ್ಲಿಂದ ಹೋದೆ. ಗತಿಹೀನಳನ್ನಾಗಿ ಸರ್ವೇಶ್ವರ ನನ್ನನ್ನು ಹಿಂದಕ್ಕೆ ಕರೆತಂದಿದ್ದಾರೆ. ಹೀಗೆ ಸರ್ವಶಕ್ತ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವಾಗ ನೀವು ನನ್ನನ್ನು ನವೊಮಿ ಎಂದು ಕರೆಯುವುದು ಸರಿಯೇ?’ ಎಂದು ಉತ್ತರಕೊಟ್ಟಳು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲೇ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.


ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ನೆರೆಯವರಿಗೆ ನಮ್ಮನು ಕಲಹ ಕಾರಣವಾಗಿಸಿದೆ I ಶತ್ರುಗಳ ಅಪಹಾಸ್ಯಕೆ ನಮ್ಮನು ಗುರಿಪಡಿಸಿದೆ II


ನಿನ್ನ ಕೋಪತಾಪಗಳೆ ಕಾರಣ ಇದಕ್ಕೆಲ್ಲಾ I ನನ್ನನು ಮೇಲಕ್ಕೆತ್ತಿ ಬಿಸಾಡಿಬಿಟ್ಟಿರುವೆಯಲ್ಲಾ II


ಅನ್ಯಜನರು ನುಡಿಯುವುದೆಂತು : I “ಅವರ ದೇವರೆಲ್ಲಿ?” ಎಂದು II


ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II


ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು