Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:7 - ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಜಲಪಾತಗಳಿಂದುಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕೂಗುತ್ತದೋ ಎಂಬಂತಿರುವದು. ಹಾಗೆಯೇ ನೀನು ಅಲ್ಲಕಲ್ಲೋಲವಾದ [ದುಃಖ ಪ್ರವಾಹದ] ತೆರೆಗಳನ್ನು ನನ್ನ ತಲೆಯ ಮೇಲೆ ದಾಟಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜಲಪಾತದ ಘೋಷದಂತೆಯೂ ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:7
10 ತಿಳಿವುಗಳ ಹೋಲಿಕೆ  

ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!


ನಿನ್ನ ಕಡುಕೋಪ ಎರಗಿಬಿಟ್ಟಿದೆ ನನ್ನ ಮೇಲೆ II ನನ್ನ ಬಾಧಿಸುತ್ತಿವೆ ಅದರ ಕಲ್ಲೋಲ ಮಾಲೆ II


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ನನಗೆ ವಿರುದ್ಧ ಹೊಸ ಹೊಸ ಸಾಕ್ಷಿಗಳನ್ನು ಬರಮಾಡುವೆ ನನ್ನ ಮೇಲೆ ಹೆಚ್ಚುಹೆಚ್ಚಾಗಿ ಸಿಟ್ಟುಗೊಳ್ಳುವೆ ಅಲೆಅಲೆಯಾಗಿ ಹಗೆಗಳನ್ನು ನನ್ನ ಮೇಲೆ ಧಾಳಿಮಾಡ ಬಿಡುವೆ.


“ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ ಜೋರ್ಡನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು