Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 43:1 - ಕನ್ನಡ ಸತ್ಯವೇದವು C.L. Bible (BSI)

1 ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 43:1
21 ತಿಳಿವುಗಳ ಹೋಲಿಕೆ  

ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು : ನಿರಪರಾಧಿ, ನೀತಿವಂತ ನಾನು II


ಹೇ, ದೇವಾ, ನಿನ್ನ ನೀತಿಗನುಸಾರ ತೀರ್ಪುಕೊಡು I ಶತ್ರುಗಳೆನ್ನ ವಿಷಯದಲ್ಲಿ ಹರ್ಷಗೊಳ್ಳದಂತೆ ಮಾಡು II


ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.


ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ I ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ II


ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ಅವರನ್ನು ಕಾಪಾಡುವ ಸರ್ವೇಶ್ವರ ಬಲಶಾಲಿ, ಆತ ನಿನ್ನೊಡನೆ ವಾದಿಸಬಲ್ಲ ಅವರ ಪರವಾಗಿ.


ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.


ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II


ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆಮಾಡಿ ಹೇಳು,” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು.


ಸಭೆ ಸೇರಲಿ ಸಕಲ ಜನಾಂಗಗಳು ನಿನ್ನ ಸುತ್ತಲು I ನೀ ಆಸ್ಥಾನವನೇರು, ಅವರನು ಪರಿಪಾಲಿಸಲು II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು