Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 43:4 - ಕನ್ನಡ ಸತ್ಯವೇದವು C.L. Bible (BSI)

4 ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 43:4
16 ತಿಳಿವುಗಳ ಹೋಲಿಕೆ  

ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II


ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ I ಕೀರ್ತಿಸಿ ದಶತಂತಿ ವೀಣೆಯನು ಬಾರಿಸುತ II


ಆರಂಭಿಸಿ ಸಂಗೀತವನು, ಬಾರಿಸಿ ಮೃದಂಗವನು I ನುಡಿಸಿರಿ ಮಧುರ ವೀಣೆಯನು, ಸ್ವರಮಂಡಲವನು II


ನನಗಾಗುತ್ತದೆ ನಿನ್ನ ಸ್ಮರಣೆ ಮನ ಕುಗ್ಗಿದಾಗ I ಜೋರ್ದನ್, ಹೆರ್ಮನ್ ನಾಡಿಂದ, ಮೀಸಾರ್ ಗುಡ್ಡೆಯಿಂದ II


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ನಿನ್ನ ಸ್ತುತಿಸುವೆನು ಪ್ರಭು ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II


ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು