Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:17 - ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಮರೆಯಲಿಲ್ಲ, ನಿನ್ನ ಒಪ್ಪಂದವನು ಮೀರಲಿಲ್ಲ I ಆದರೂ ಒದಗಿವೆಯಲ್ಲ ನಮಗೀ ಅನಾಹುತಗಳೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾವು ನಿನ್ನನ್ನು ಮರೆಯದೆಯೂ ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾವು ನಿನ್ನನ್ನು ಮರೆತಿಲ್ಲದಿದ್ದರೂ ನಾವು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿಲ್ಲದಿದ್ದರೂ ಇವೆಲ್ಲಾ ನಮಗೆ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಾವು ನಿಮ್ಮನ್ನು ಮರೆತುಬಿಡಲಿಲ್ಲ; ನಿಮ್ಮ ಒಡಂಬಡಿಕೆಯನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:17
12 ತಿಳಿವುಗಳ ಹೋಲಿಕೆ  

ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.


“ನಾನು ನಿಮ್ಮನ್ನು ಲೆಕ್ಕಿಸುವಂತೆ, ಕೋಲಿನ ಕೆಳಗೆ ಹೋಗುವಂತೆಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು,


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ನಂಬಿಕೆಗೆಟ್ಟ ದ್ರೋಹಿಗಳಾದರು ತಮ್ಮ ಹಿರಿಯರಂತೆ I ಆತನಿಗೆ ಎದುರುಬಿದ್ದರು ಹಿಮ್ಮುಖವಾದ ಬಿಲ್ಲಿನಂತೆ II


ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II


ನಮ್ಮ ದೇವನ ನಾಮವನು ಮರೆತಿದ್ದೆವಾದರೆ I ಅನ್ಯದೇವರಿಗೆ ನಾವು ಕೈ ಮುಗಿದಿದ್ದೆವಾದರೆ, II


ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು