Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:2 - ಕನ್ನಡ ಸತ್ಯವೇದವು C.L. Bible (BSI)

2 ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:2
27 ತಿಳಿವುಗಳ ಹೋಲಿಕೆ  

ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು.


ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II


ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.


ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು.


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.


ನಿಮಗೆ ಮುಂಚಿತವಾಗಿ ಕಣಜದ ಹುಳುಗಳನ್ನು ಕಳಿಸುವೆನು. ಅವು, ಆ ಹಿವ್ವಿಯರು, ಕಾನಾನ್ಯರು ಹಾಗೂ ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಓಡಿಸಿ ಬಿಡುವವು.


ಫರೋಹನ ಕುದುರೆಗಳು, ರಥಗಳು ಹಾಗು ರಾಹುತರು ಸಮುದ್ರವನ್ನು ಹೊಕ್ಕು ನಡೆಯಲಾರಂಭಿಸಿದಾಗ ಸರ್ವೇಶ್ವರ ಸ್ವಾಮಿ ಸಮುದ್ರದ ನೀರನ್ನು ಮೊದಲಿನಂತೆ ಬರಮಾಡಿ ಅವರನ್ನು ಮುಳುಗಿಸಿಬಿಟ್ಟರು. ಇಸ್ರಯೇಲರಾದರೋ, ಸಮುದ್ರದ ನಡುವೆ ಒಣನೆಲದಲ್ಲಿ ನಡೆದು ಹೋದರು.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ಈಗ ನಮಗೆ ತಿಳಿದಿರುವಂತೆ ನಿಮಗಿಂತ ದೊಡ್ಡವೂ ಬಲಿಷ್ಠವೂ ಆದ ಜನಾಂಗಗಳನ್ನು ಹೊರಡಿಸಿ ಅವರ ನಾಡಲ್ಲೆ ನಿಮ್ಮನ್ನು ಸೇರಿಸಿ, ಆ ನಾಡನ್ನು ನಿಮಗೇ ಸ್ವಂತ ನಾಡನ್ನಾಗಿ ಕೊಡಲು ಸಂಕಲ್ಪಿಸಿದ್ದಾರೆ. ತಾವೇ ನಿಮ್ಮೊಂದಿಗಿದ್ದು, ತಮ್ಮ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆದುತಂದಿದ್ದಾರೆ.


ನೆನಪಿಗೆ ತಂದುಕೊಳ್ಳಿ ಆ ಪೂರ್ವಕಾಲವನು ಆಲೋಚಿಸಿ ನೋಡಿ ಪೂರ್ವಿಕರ ಚರಿತೆಯನು. ವಿಚಾರಿಸಿದರೆ ತಿಳಿಸುವರು ನಿಮ್ಮ ನಿಮ್ಮ ತಂದೆಗಳು ಕೇಳಿದರೆ ವಿವರಿಸುವರು ನಿಮ್ಮ ನಿಮ್ಮ ಹಿರಿಯರು.


ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,


ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟುಮಾಡಿದರು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು