Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:20 - ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ದೇವನ ನಾಮವನು ಮರೆತಿದ್ದೆವಾದರೆ I ಅನ್ಯದೇವರಿಗೆ ನಾವು ಕೈ ಮುಗಿದಿದ್ದೆವಾದರೆ, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಮ್ಮ ದೇವರ ಹೆಸರನ್ನು ನಾವು ಮರೆತುಬಿಟ್ಟೆವೋ? ಅನ್ಯದೇವರುಗಳಿಗೆ ನಾವು ಪ್ರಾರ್ಥಿಸಿದೆವೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:20
11 ತಿಳಿವುಗಳ ಹೋಲಿಕೆ  

“ಇರಬಾರದು ಅನ್ಯದೇವತೆಗಳು ನಿಮ್ಮಲಿ I ಪರದೇವತೆಗಳ ಪೂಜೆ ಕೂಡದು ನಿಮ್ಮಲಿ, II


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು I ದೇವರಿಗೆ ಕೈ ಮುಗಿವರು ಇಥಿಯೋಪಿಯದವರು II


ಸುತ್ತಮುತ್ತಲಿರುವ ಜನಾಂಗಗಳು ಹಿಂಬಾಲಿಸುವ ದೇವರುಗಳನ್ನು ನೀನು ಆರಾಧಿಸಬಾರದು.


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ನಿನ್ನ ಮರೆಯಲಿಲ್ಲ, ನಿನ್ನ ಒಪ್ಪಂದವನು ಮೀರಲಿಲ್ಲ I ಆದರೂ ಒದಗಿವೆಯಲ್ಲ ನಮಗೀ ಅನಾಹುತಗಳೆಲ್ಲ II


ಬಳಿಕ ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ನಿಂತು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು