Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:23 - ಕನ್ನಡ ಸತ್ಯವೇದವು C.L. Bible (BSI)

23 ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕರ್ತನೇ, ಯಾಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ನಮ್ಮನ್ನು ಬಿಟ್ಟೇಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಒಡೆಯನೇ, ಎದ್ದೇಳು! ನೀನು ನಿದ್ರಿಸುತ್ತಿರುವುದೇಕೆ? ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರೇ, ಏಳಿರಿ, ಹೌದು ಎದ್ದೇಳಿರಿ ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:23
11 ತಿಳಿವುಗಳ ಹೋಲಿಕೆ  

ಪ್ರಭುವೆದ್ದನು ನಿದ್ರೆಯಿಂದಲೋ ಎಂಬಂತೆ I ಮಧುವಿನ ಅಮಲಿನಿಂದೆಚ್ಚೆತ್ತ ಬಲಿಷ್ಠನಂತೆ II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ನನ್ನ ನ್ಯಾಯವನು ನಿರ್ಣಯಿಸು ದೇವಾ ಎಚ್ಚೆತ್ತು I ನನ್ನ ವಿವಾದವನು ವಿಚಾರಿಸು ಪ್ರಭು ನೀನೆದ್ದು ನಿಂತು II


ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಪ್ರಭು, ನನ್ನ ತಳ್ಳಿಬಿಟ್ಟೆಯೇಕೆ? I ಮುಖವನು ತಿರುಗಿಸಿಕೊಂಡೆಯೇಕೆ? II


ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II


ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು