Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:25 - ಕನ್ನಡ ಸತ್ಯವೇದವು C.L. Bible (BSI)

25 ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಮ್ಮ ಪ್ರಾಣವು ಧೂಳಿನಲ್ಲಿ ಅಣಗಿಹೋಗಿದೆ; ಶರೀರವು ನೆಲಕ್ಕೆ ಹತ್ತಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ. ನಮ್ಮ ಶರೀರವು ನೆಲಕ್ಕೆ ಹತ್ತಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ಪ್ರಾಣವು ಮಣ್ಣು ಪಾಲಾದಂತಿದೆ. ನಮ್ಮ ಶರೀರವು ನೆಲ ಪಾಲಾದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:25
7 ತಿಳಿವುಗಳ ಹೋಲಿಕೆ  

ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ಮೃಷ್ಟಾನ್ನ ಉಣ್ಣುತ್ತಿದ್ದವರು ದಿಕ್ಕೆಟ್ಟು ಅಲೆಯುತ್ತಿರುವರು ಚಿಕ್ಕಂದಿನಿಂದಲೆ ನಾರುಮಡಿಯನ್ನು ತೊಡುತ್ತಿದ್ದವರು ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿಗೆ ಇಳಿದಿರುವರು.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ?


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ಬಾಲ್ಯದಿಂದಲು ಬಾಧಿತನು, ಮೃತಪ್ರಾಯನು I ನಿನ್ನ ದಂಡನೆ ಸಹಿಸಿ ಸೊರಗಿದವನು ನಾನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು