ಕೀರ್ತನೆಗಳು 44:3 - ಕನ್ನಡ ಸತ್ಯವೇದವು C.L. Bible (BSI)3 ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಮ್ಮ ಪಿತೃಗಳಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ಅವರ ಭುಜಬಲವೇ ಅವರಿಗೆ ಜಯಕೊಡಲಿಲ್ಲ. ನಿನ್ನ ಭುಜಬಲ, ಹಸ್ತ, ಪ್ರಸನ್ನತೆ ಇವೇ ಅವರಿಗೆ ಜಯವನ್ನುಂಟುಮಾಡಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ. ಅಧ್ಯಾಯವನ್ನು ನೋಡಿ |