Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:8 - ಕನ್ನಡ ಸತ್ಯವೇದವು C.L. Bible (BSI)

8 ನಿನ್ನಲ್ಲಿಯೇ ದೇವಾ, ಹೆಮ್ಮೆಪಡುವೆವು ಸತತ I ನಿನ್ನ ನಾಮವನೆ ಸಂಕೀರ್ತಿಸುವೆವು ನಿರುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರೇ ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಿನವೆಲ್ಲಾ ದೇವರನ್ನು ಕೊಂಡಾಡಿದೆವು. ನಿನ್ನ ಹೆಸರನ್ನು ಸದಾಕಾಲ ಸ್ತುತಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರಲ್ಲಿ ದಿನವೆಲ್ಲಾ ನಾವು ಹಿಗ್ಗುತ್ತಿದ್ದೇವೆ; ನಿಮ್ಮ ಹೆಸರನ್ನು ಯುಗಯುಗಕ್ಕೂ ಕೊಂಡಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:8
8 ತಿಳಿವುಗಳ ಹೋಲಿಕೆ  

ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರವನ್ನು ಆಧಾರವಾಗಿಟ್ಟುಕೊಂಡು ದೇವರಿಗೆ ಸೇರಿದವನೆಂದು ಕೊಚ್ಚಿಕೊಳ್ಳುತ್ತೀಯೆ;


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು