Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:9 - ಕನ್ನಡ ಸತ್ಯವೇದವು C.L. Bible (BSI)

9 ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಈಗ ನೀನು ಕೈಬಿಟ್ಟದ್ದರಿಂದ ಅವಮಾನಕ್ಕೆ ಒಳಗಾದೆವಲ್ಲಾ; ನಮ್ಮ ಸೈನ್ಯಗಳ ಸಂಗಡ ನೀನು ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ. ನಮ್ಮ ಸೈನ್ಯಗಳ ಸಂಗಡ ನೀವು ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:9
13 ತಿಳಿವುಗಳ ಹೋಲಿಕೆ  

ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ದೇವಾ ನೀ, ನಮ್ಮನು ಕೈ ಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯ ಸಮೇತ ನೀ ಬರದೆಹೋದೆಯೋ? II


ದೇವಾ, ನೀ ನಮ್ಮನು ಕೈಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯಸಮೇತ ನೀ ಬರದೆ ಹೋದೆಯೋ? II


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II


ಪ್ರಭು, ನನ್ನ ತಳ್ಳಿಬಿಟ್ಟೆಯೇಕೆ? I ಮುಖವನು ತಿರುಗಿಸಿಕೊಂಡೆಯೇಕೆ? II


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು