ಕೀರ್ತನೆಗಳು 45:1 - ಕನ್ನಡ ಸತ್ಯವೇದವು C.L. Bible (BSI)1 ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿ |