Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನಿಗೆ ನಮಸ್ಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ಸೌಂದರ್ಯವನ್ನು ಮಹಾರಾಜರು ಮೆಚ್ಚಲಿ, ಅವರೇ ನಿನ್ನ ಒಡೆಯ ಅವರನ್ನು ಗೌರವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:11
25 ತಿಳಿವುಗಳ ಹೋಲಿಕೆ  

ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು.


ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.


ನನ್ನ ಪ್ರಿಯಳೇ, ಸರ್ವಾಂಗಸುಂದರಿಯೇ, ನಿನ್ನೊಳು ಯಾವ ಕಳಂಕವು ಇಲ್ಲದಿರುವೆ.


ನನ್ನ ಪ್ರಿಯಳು ಸ್ತ್ರೀಯರಲ್ಲಿ ಶ್ರೇಷ್ಠಳು ಮುಳ್ಳುಪೊದರಿನ ನಡುವೆ ತಾವರೆಯಂತಿಹಳು. ನಲ್ಲೆ :


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು