Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:12 - ಕನ್ನಡ ಸತ್ಯವೇದವು C.L. Bible (BSI)

12 ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತೂರ್ ಸಂಸ್ಥಾನದವರು ಕಾಣಿಕೆಗಳಿಂದ ನಿನ್ನನ್ನು ಸನ್ಮಾನಿಸುವರು; ಪ್ರಜೆಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತೂರ್ ಪಟ್ಟಣದ ಶ್ರೀಮಂತರು ನಿನ್ನನ್ನು ಸಂಧಿಸಲು ನಿನಗಾಗಿ ಉಡುಗೊರೆಗಳನ್ನು ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಟೈರಿನ ಮಗಳು ಕಾಣಿಕೆಯೊಂದಿಗೆ ಬರುವಳು; ಐಶ್ವರ್ಯವಂತರು ನಿನ್ನನ್ನು ವರಿಸಲು ಹುಡುಕಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:12
12 ತಿಳಿವುಗಳ ಹೋಲಿಕೆ  

ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಎನ್ನಿನಿಯನೇ, ಬಾ ಹೋಗೋಣ ವನಕೆ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವುದಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು