Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:16 - ಕನ್ನಡ ಸತ್ಯವೇದವು C.L. Bible (BSI)

16 ನಿನ್ನ ಪುತ್ರರು ಅಲಂಕರಿಸುವರು ಪೂರ್ವಜರ ಸ್ಥಾನವನು I ನೇಮಕಗೊಳ್ಳುವರು ಉತ್ತರಾಧಿಕಾರಿಗಳಾಗಿ ಜಗದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 [ಅರಸನೇ,] ವಂಶಪಾರಂಪರ್ಯವಾಗಿ ಬಂದ ಸ್ಥಾನದಲ್ಲಿರುವದಕ್ಕೆ ನಿನಗೆ ಮಕ್ಕಳು ಹುಟ್ಟುವರು; ಅವರನ್ನು ದೇಶದಲ್ಲೆಲ್ಲಾ ಅಧಿಕಾರಿಗಳನ್ನಾಗಿ ನೇವಿುಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರಾಜನೇ, ನಿನ್ನ ಗಂಡುಮಕ್ಕಳು ನಿನ್ನ ತರುವಾಯ ಆಡಳಿತ ಮಾಡುವರು; ನೀನು ಅವರನ್ನು ನಿನ್ನ ದೇಶದಲ್ಲೆಲ್ಲಾ ಅಧಿಪತಿಗಳನ್ನಾಗಿ ನೇಮಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ಪಿತೃಗಳ ಸ್ಥಳಗಳನ್ನು ನಿಮ್ಮ ಮಕ್ಕಳು ತೆಗೆದುಕೊಳ್ಳುವರು. ಮಹಾರಾಜರು ಅವರನ್ನು ಭೂಮಿಯ ದೇಶದಲ್ಲೆಲ್ಲಾ ರಾಜಪುತ್ರರಾಗಿ ಇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:16
12 ತಿಳಿವುಗಳ ಹೋಲಿಕೆ  

ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II


ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು