Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:2 - ಕನ್ನಡ ಸತ್ಯವೇದವು C.L. Bible (BSI)

2 ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹಳ ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬದು ನಿನ್ನ ಬಾಯ ಮಾತುಗಳಿಂದ ಸ್ಪಷ್ಟವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ. ನಿಮ್ಮ ತುಟಿಗಳಲ್ಲಿ ಕೃಪೆಯ ಅಭಿಷೇಕವಿದೆ; ಆದ್ದರಿಂದ ದೇವರು ಎಂದೆಂದಿಗೂ ನಿಮ್ಮನ್ನು ಆಶೀರ್ವದಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:2
19 ತಿಳಿವುಗಳ ಹೋಲಿಕೆ  

ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಸವಿಮಾತಿನಿಂದ ಅರಸನ ಗೆಳೆತನ ಪಡೆಯಬಹುದು; ಸರ್ವೇಶ್ವರ ಬಯಸುವುದು ಅಂತರಂಗ ಶುದ್ಧಿಯನ್ನು.


ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.


ಅಲಂಕೃತ ರಾಜನನ್ನು ನಿಮ್ಮ ಕಣ್ಣುಗಳು ಕಾಣುವುವು. ಸವಿಸ್ತಾರವಾದ ನಾಡೊಂದನ್ನು ನಿಮ್ಮ ಕಣ್ಣುಗಳು ನೋಡಿ ನಲಿಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು