Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜವಿರೋಧಿಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಬಾಣಗಳು ತೀಕ್ಷ್ಣವಾಗಿವೆ. ಅವು ನಿನ್ನ ಶತ್ರುಗಳ ಎದೆಗೆ ನಾಟಿಕೊಳ್ಳುತ್ತವೆ; ಶತ್ರುಗಳು ನಿನ್ನ ಕಣ್ಣೆದುರಿನಲ್ಲೇ ನೆಲಕ್ಕುರುಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:5
18 ತಿಳಿವುಗಳ ಹೋಲಿಕೆ  

ಬಾಣ ಹೂಡಿ ಅವರ ಹಣೆಗೆ ನೀ ಬಿಡುವೆ I ಬೆನ್ನುಮಾಡಿ ಅವರೋಡುವಂತೆ ಮಾಡುವೆ II


ನಿನ್ನ ಬಾಣಗಳು ನಾಟಿವೆ ನನ್ನೊಳಗೆ I ನಿನ್ನ ಹಸ್ತವು ಎರಗಿದೆ ನನ್ನ ಮೇಲೆ II


ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.


ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು