Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:7
32 ತಿಳಿವುಗಳ ಹೋಲಿಕೆ  

ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II


ಸತ್ಯಸಂಧನು, ನ್ಯಾಯಪ್ರಿಯನು ಆತನು I ಅಚಲಪ್ರೀತಿಯಿಂದ ಜಗವನು ತುಂಬಿಹನು II


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


“ನನ್ನ ದಾಸ ದಾವೀದನನು ಗುರುತಿಸಿರುವೆ I ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ II


ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.


ಆ ಎಣ್ಣೆಯಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.


ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು