ಕೀರ್ತನೆಗಳು 45:8 - ಕನ್ನಡ ಸತ್ಯವೇದವು C.L. Bible (BSI)8 ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು. ಅಧ್ಯಾಯವನ್ನು ನೋಡಿ |