Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ I ಸರ್ವೇಶ್ವರನಿಗೆ ಜಯಜಯ ಘೋಷ ಮಾಡಿರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸರ್ವಜನಾಂಗಗಳಿರಾ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದಘೋಷ ಮಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:1
18 ತಿಳಿವುಗಳ ಹೋಲಿಕೆ  

ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II


ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ I ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ II


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II


ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.


ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರ ಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”


ಚಪ್ಪಾಳೆ ಹೊಡೆಯಲಿ ನದಿಗಳು I ತಟ್ಟಾಡಲಿ ಬೆಟ್ಟಗುಡ್ಡಗಳು II


ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಯೇಲರನ್ನೂ ಅಬೀಯನಿಂದ ಹಾಗೂ ಯೆಹೂದ್ಯರಿಂದ ಅಪಜಯಗೊಳಿಸಿದರು.


ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.


ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು