Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:2 - ಕನ್ನಡ ಸತ್ಯವೇದವು C.L. Bible (BSI)

2 ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪರಾತ್ಪರನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಅಧಿರಾಜನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:2
18 ತಿಳಿವುಗಳ ಹೋಲಿಕೆ  

“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II


ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II


ದೇವನು ಭೂಮಂಡಲಕ್ಕೆಲ್ಲಾ ಒಡೆಯನು I ಕೀರ್ತನೆಯಿಂದ ಕೊಂಡಾಡಿರಿ ಆತನನು II


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಜನರು ಸಾರುವರು ನಿನ್ನ ಅದ್ಭುತ ಶಕ್ತಿಯನು I ನಾ ಪ್ರಸಿದ್ಧಪಡಿಸುವೆನು ನಿನ್ನ ಮಹಿಮೆಯನು II


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


“ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು