Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:6 - ಕನ್ನಡ ಸತ್ಯವೇದವು C.L. Bible (BSI)

6 ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ I ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ; ನಮ್ಮ ರಾಜರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:6
16 ತಿಳಿವುಗಳ ಹೋಲಿಕೆ  

ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II


“ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು.


ಹಾಡಿ ಪಾಡಿ ಹೊಗಳಿರಿ ಆತನನು I ಧ್ಯಾನಿಸಿ ಆತನ ಪವಾಡಗಳನು II


ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು