Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:7 - ಕನ್ನಡ ಸತ್ಯವೇದವು C.L. Bible (BSI)

7 ದೇವನು ಭೂಮಂಡಲಕ್ಕೆಲ್ಲಾ ಒಡೆಯನು I ಕೀರ್ತನೆಯಿಂದ ಕೊಂಡಾಡಿರಿ ಆತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:7
7 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ವಹಿಸಿಕೊಂಡನು ದೇವನು ಸರ್ವಾಧಿಪತ್ಯ I ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು