Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:9 - ಕನ್ನಡ ಸತ್ಯವೇದವು C.L. Bible (BSI)

9 ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನಾಂಗಗಳಲ್ಲಿ ಶ್ರೇಷ್ಠರಾದವರು ಅಬ್ರಹಾಮನ ದೇವರ ಪ್ರಜೆಯಾಗಿರುವದಕ್ಕೆ ಕೂಡಿಬರುತ್ತಾರೆ; ಯಾಕಂದರೆ ಭೂಪಾಲಕರೆಲ್ಲಾ ದೇವರಿಗೇ ಅಧೀನರಾಗಿದ್ದಾರೆ. ಆತನೇ ಸರ್ವೋನ್ನತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:9
21 ತಿಳಿವುಗಳ ಹೋಲಿಕೆ  

ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;


ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು