Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:10 - ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ನಾಮದಂತೆ ನಿನ್ನಾ ಹೊಗಳಿಕೆ I ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ I ದೇವಾ, ನೀತಿಭರಿತ ನಿನ್ನ ಆಳ್ವಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರೇ, ನಾವು ನಿನ್ನ ಆಲಯದಲ್ಲಿ ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ ಲೋಕವೆಲ್ಲಾ ನಿನ್ನನ್ನು ಹೊಗಳುವದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರೇ, ನೀನು ಪ್ರಖ್ಯಾತನಾಗಿರುವೆ. ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; ನಿಮ್ಮ ಬಲಗೈ ನೀತಿಯಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:10
16 ತಿಳಿವುಗಳ ಹೋಲಿಕೆ  

“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಪ್ರಭುವಿನಾ ಸಿರಿನಾಮವು ಸ್ತುತ್ಯ I ಪೂರ್ವ ಪಶ್ಚಿಮದವರೆಗೂ ಸ್ತುತ್ಯ II


“ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ


ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ಸರ್ವೇಶ ನಮ್ಮ ದೇವನೆಂಬುದು ಪ್ರಕಟಿತ I ಆತನಿತ್ತ ತೀರ್ಪು ವಿಶ್ವವ್ಯಾಪ್ತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು