Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:11 - ಕನ್ನಡ ಸತ್ಯವೇದವು C.L. Bible (BSI)

11 ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ ಯೆಹೂದಸೀಮೆಯ ನಿವಾಸಿಗಳು ಆನಂದಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ; ಯೆಹೂದದ ಊರುಗಳು ಉಲ್ಲಾಸಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದ ಪುತ್ರಿಯರು ಉಲ್ಲಾಸಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:11
17 ತಿಳಿವುಗಳ ಹೋಲಿಕೆ  

ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಯೇಸು ಅವರ ಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆನು ವನದ ಹುಲ್ಲೆ ಹರಿಣಿಗಳ ಮೇಲೆ ಆಣೆಯಿಟ್ಟು.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು