Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:7 - ಕನ್ನಡ ಸತ್ಯವೇದವು C.L. Bible (BSI)

7 ತಾರ್ಷಿಷ್ ನಾಡಿನ ದೊಡ್ಡ ದೊಡ್ಡ ಹಡಗುಗಳನು I ಚಂಡಮಾರುತದಿಂದ ಪುಡಿಪುಡಿ ಮಾಡಿದೆ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ ನೀನು ಅವರನ್ನು ನಾಶಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:7
7 ತಿಳಿವುಗಳ ಹೋಲಿಕೆ  

ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.”


ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಇದನ್ನು ಕೇಳಿ ನಡುಗುತ್ತಿರುವುವು ಜನಾಂಗಗಳು ಪ್ರಸವವೇದನೆ ಪಡುತ್ತಿರುವರು ಫಿಲಿಷ್ಟಿಯರು.


ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು