ಕೀರ್ತನೆಗಳು 48:8 - ಕನ್ನಡ ಸತ್ಯವೇದವು C.L. Bible (BSI)8 ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾವು ಹೇಗೆ ಕೇಳಿದೆವೋ ಹಾಗೆಯೇ ಕಣ್ಣಾರೆ ಕಂಡೆವು, ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: ದೇವರು ಪಟ್ಟಣವನ್ನು ಎಂದೆಂದಿಗೂ ಸ್ಥಿರಪಡಿಸುವರು. ಅಧ್ಯಾಯವನ್ನು ನೋಡಿ |