Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:9 - ಕನ್ನಡ ಸತ್ಯವೇದವು C.L. Bible (BSI)

9 ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು I ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ಅದನ್ನು ಶಾಶ್ವತವಾಗಿಯೇ ಸ್ಥಾಪಿಸುವನು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:9
14 ತಿಳಿವುಗಳ ಹೋಲಿಕೆ  

ಕೈಬಿಡದ ನಿನ್ನೊಲವು ನನ್ನ ಕಣ್ಮುಂದಿದೆ I ನೀ ತೋರಿದ ಸತ್ಯಪಥದಲಿ, ನಾ ನಡೆದೆ II


ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


“ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ.


ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II


ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು