Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:10 - ಕನ್ನಡ ಸತ್ಯವೇದವು C.L. Bible (BSI)

10 ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸುಜ್ಞಾನಿಗಳು ಸಾಯುವದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ, ಜ್ಞಾನಿಗಳು ಸಾಯುವುದನ್ನು ಕಾಣುತ್ತೇವೆ. ಹಾಗೆಯೇ ಮೂರ್ಖರೂ ಜ್ಞಾನಹೀನರೂ ಸಹ ನಾಶವಾಗುತ್ತಾರೆ. ಅವರ ಆಸ್ತಿಯನ್ನು ಇತರರು ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:10
21 ತಿಳಿವುಗಳ ಹೋಲಿಕೆ  

ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಮಾನವರಲ್ಲಿ ನನ್ನಂಥ ಪಶುಪ್ರಾಯನಿಲ್ಲ; ಮನುಷ್ಯ ವಿವೇಕವೂ ನನಗಿಲ್ಲ.


ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ? I ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ? II


ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II


ಸಾಯುವಾಗ ಏನನೂ ಕೊಂಡು ಹೋಗುವುದಿಲ್ಲ I ಘನತೆ ಅವನ ಬೆನ್ನು ಹತ್ತಿ ಹೋಗುವಂತಿಲ್ಲ II


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II


ಬುದ್ಧಿವಂತರ ಕಿರೀಟ ಅವರ ಜ್ಞಾನವೇ; ದಡ್ಡರ ಶಿರಮುಕುಟ ಅವರ ದಡ್ಡತನವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು