Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:11 - ಕನ್ನಡ ಸತ್ಯವೇದವು C.L. Bible (BSI)

11 ತಮ್ಮ ಹೆಸರಲೆಸ್ಟೋ ಸೊತ್ತಿದ್ದರೂ I ಸಮಾಧಿಯೇ ಅವರಿಗೆ ಶಾಶ್ವತ ಮಂದಿರವು I ಅದುವದುವೇ ಅವರಿಗೆ ನಿತ್ಯ ನಿವಾಸವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾರು ವಿಸ್ತಾರವಾದ ಭೂಸ್ಥಿತಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೋ ಅಂಥವರಿಗೂ ಸಮಾಧಿಯೇ ಶಾಶ್ವತಮಂದಿರವು; ಅದೇ ಅವರ ನಿತ್ಯನಿವಾಸಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜಮೀನುಗಳಿಗೆ ತಮ್ಮ ಹೆಸರುಗಳನ್ನು ಇಟ್ಟುಕೊಳ್ಳುತ್ತಾರೆ. ಆದರೂ ಸಮಾಧಿಯೇ ಅವರಿಗೆ ಶಾಶ್ವತಮಂದಿರವು. ಅದೇ ಅವರ ತಲತಲಾಂತರಕ್ಕೂ ನಿವಾಸಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:11
13 ತಿಳಿವುಗಳ ಹೋಲಿಕೆ  

ಕಾಯಿನನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ತಾನು ಕಟ್ಟಿದ ಊರಿಗೆ ಕಾಯಿನನು ‘ಹನೋಕ’ ಎಂದು ತನ್ನ ಮಗನ ಹೆಸರನ್ನೇ ಇಟ್ಟನು.


ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ನೆನೆವನು ಮನದೊಳು ದುರುಳನಿಂತು: I “ಯಾರಿಗೂ ನನ್ನ ಕದಲಿಸಲಾಗದು I ಬಾರದು ನನಗೆಂದಿಗು ಆಪತ್ತು” II


ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.


ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ಆಗ ಯೇಸು, “ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ.


ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.


(ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).


ಇಂತಿರಲು ಪ್ರಭು, ನಾನೇತಕೆ ಕಾದಿರಬೇಕು? I ನೀನೆ ಅಲ್ಲವೆ ನನಗೆ ನಂಬಿಕೆ, ಇದು ಸಾಕು II


“ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.


ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು