Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:14 - ಕನ್ನಡ ಸತ್ಯವೇದವು C.L. Bible (BSI)

14 ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:14
23 ತಿಳಿವುಗಳ ಹೋಲಿಕೆ  

ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?


ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಜನಾಂಗಗಳನಾತ ನಮಗಧೀನಪಡಿಸಿಹನು I ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II


ನಮ್ಮನೊಪ್ಪಿಸಿರುವೆ ವಧ್ಯಸ್ಥಾನಕೊಯ್ದ ಕುರಿಗಳಂತೆ I ಚದರಿಸಿಬಿಟ್ಟಿರುವೆ ನಮ್ಮನು ಅನ್ಯ ಜನಾಂಗಗಳ ಮಧ್ಯೆ II


ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ಇವರಿಬ್ಬರೂ ಮಣ್ಣಿನಲ್ಲಿ ಹೂಣಲ್ಪಡುತ್ತಾರೆ ಹುಳುಗಳು ಅವರನು ಮುತ್ತಿಕೊಳ್ಳುತ್ತವೆ.


ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ.


ಅವರ ಗುಡಾರದ ಗೂಟವನ್ನು ಕೀಳಲಾಗುವುದು ಬುದ್ಧಿಹೀನರಾಗಿಯೆ ಅವರು ಸತ್ತುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು