Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:15 - ಕನ್ನಡ ಸತ್ಯವೇದವು C.L. Bible (BSI)

15 ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ ಸ್ವೀಕಾರ ಮಾಡುವನು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:15
13 ತಿಳಿವುಗಳ ಹೋಲಿಕೆ  

ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು