Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:16 - ಕನ್ನಡ ಸತ್ಯವೇದವು C.L. Bible (BSI)

16 ಒಬ್ಬನು ಧನಿಕನಾದಾಗ ನೀ ಕಳವಳಗೊಳ್ಳಬೇಡ I ಅವನ ಮನೆಯ ಸೊಬಗನು ಕಂಡು ನಿರಾಶೆಗೊಳ್ಳಬೇಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಬ್ಬನ ಐಶ್ವರ್ಯವೂ ಗೃಹವೈಭವವೂ ವೃದ್ಧಿಯಾದಾಗ ಕಳವಳಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ಐಶ್ವರ್ಯವಂತರಾಗಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ. ಜನರು ಭವ್ಯವಾದ ಮನೆಗಳಲ್ಲಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಒಬ್ಬನು ಐಶ್ವರ್ಯವಂತನಾದರೆ ಮತ್ತು ಅವನ ಮನೆಯ ಘನತೆ ದೊಡ್ಡದಾದರೆ ಕಳವಳ ಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:16
10 ತಿಳಿವುಗಳ ಹೋಲಿಕೆ  

ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ರಾಷ್ಟ್ರಗಳ ಸಿರಿಸಂಪತ್ತನ್ನೂ ಘನಮಾನವನ್ನೂ ಅಲ್ಲಿಗೆ ತರಲಾಗುವುದು.


ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.


ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II


ಆಪತ್ಕಾಲದಲಿ ನಾನೇಕೆ ಭಯಪಡಬೇಕು? I ದ್ವೇಷಿಗಳ ದಾಳಿಗೆ ನಾನೇಕೆ ಹೆದರಬೇಕು? II


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ಲಾಬಾನನ ಮಕ್ಕಳು, “ನಮ್ಮ ತಂದೆಯ ಆಸ್ತಿಪಾಸ್ತಿಯೆಲ್ಲ ಯಕೋಬನ ಪಾಲಾಯಿತು. ನಮ್ಮ ತಂದೆಯ ಆಸ್ತಿಯಿಂದಲೇ ಅವನು ಇಷ್ಟು ಐಶ್ವರ್ಯವನ್ನು ಶೇಖರಿಸಿದ್ದು,” ಎಂದು ಆಡಿಕೊಂಡರು.


ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು