Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:17 - ಕನ್ನಡ ಸತ್ಯವೇದವು C.L. Bible (BSI)

17 ಸಾಯುವಾಗ ಏನನೂ ಕೊಂಡು ಹೋಗುವುದಿಲ್ಲ I ಘನತೆ ಅವನ ಬೆನ್ನು ಹತ್ತಿ ಹೋಗುವಂತಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರು ಸಾಯುವಾಗ ತಮ್ಮೊಂದಿಗೆ ಏನನ್ನೂ ತೆಗೆದುಕೊಂಡು ಹೋಗಲಾರರು. ಅವರ ವೈಭವವು ಅವರೊಂದಿಗೆ ಹೋಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:17
10 ತಿಳಿವುಗಳ ಹೋಲಿಕೆ  

ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡು ಒಯ್ಯುವುದಿಲ್ಲ.


ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ


ಬಿತ್ತಿದ್ದು ಕುರೂಪಿಯಾದುದು; ಪುನರುತ್ಥಾನಹೊಂದುವುದು ಕೋಮಲವಾದುದು.


‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.


ತಾಯಿಯ ಗರ್ಭದಿಂದ ಹೇಗೆ ಬರಿಗೈಯಲ್ಲಿ ಬಂದನೋ ಹಾಗೇ ಬರಿಗೈಯಲ್ಲಿ ಗತಿಸಿಹೋಗುತ್ತಾನೆ. ಅವನು ಪಟ್ಟ ಎಲ್ಲ ಪ್ರಯಾಸಕ್ಕಾಗಿ ತನ್ನ ಕೈಯಲ್ಲಿ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು