Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:19 - ಕನ್ನಡ ಸತ್ಯವೇದವು C.L. Bible (BSI)

19 ಸೇರದಿರನಾತ ಪಿತೃಗಳಧೋಗತಿಯನು I ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪಿತೃಗಳ ಬಳಿಗೆ ಸೇರಿ ಅವರಂತೆಯೇ ಎಂದಿಗೂ ಬೆಳಕನ್ನು ಕಾಣದೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸತ್ತು ತನ್ನ ಪೂರ್ವಿಕರ ಬಳಿ ಸೇರುವ ಕಾಲ ಅವನಿಗೆ ಬಂದೇ ಬರುವುದು. ಅವನು ಹಗಲಿನ ಬೆಳಕನ್ನು ಮತ್ತೆಂದಿಗೂ ನೋಡಲಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ತನ್ನ ಪೂರ್ವಿಕರ ಬಳಿಗೆ ಹೋಗುವನು; ಅವರು ಸದಾಕಾಲಕ್ಕೂ ಜೀವ ಬೆಳಕನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:19
11 ತಿಳಿವುಗಳ ಹೋಲಿಕೆ  

ಅವನ ಆತ್ಮವನು ಅಧೋಲೋಕದಿಂದ ಹಿಂದಿರುಗಿಸುವನು ಜೀವಲೋಕದ ಬೆಳಕನು ಅನುಭವಿಸುವಂತೆ ಮಾಡುವನು.


ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಮನುಷ್ಯನ ಆತ್ಮ ಮೇಲಕ್ಕೆ ಏರುತ್ತದೋ? ಪಶುವಿನ ಆತ್ಮ ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ? ಯಾರಿಗೆ ಗೊತ್ತು?”


ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಏಲನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು