Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:3 - ಕನ್ನಡ ಸತ್ಯವೇದವು C.L. Bible (BSI)

3 ನನ್ನ ಬಾಯಿ ಬೋಧಿಸುವುದು ಸುಜ್ಞಾನವನು I ನನ್ನ ಮನ ಧ್ಯಾನಿಸುವುದು ವಿವೇಚನೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವದು; ನನ್ನ ಹೃದಯವು ವಿವೇಕವನ್ನು ಫಲಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನಿಮಗೆ ಸುಜ್ಞಾನವನ್ನೂ ವಿವೇಕವನ್ನೂ ಬೋಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಬಾಯಿ ಜ್ಞಾನವನ್ನು ನುಡಿಯುವುದು, ನನ್ನ ಹೃದಯದ ಧ್ಯಾನವು ವಿವೇಕವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:3
15 ತಿಳಿವುಗಳ ಹೋಲಿಕೆ  

ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ಜ್ಞಾನಿಗಳ ನುಡಿಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ಮನಸ್ಸಿನಲ್ಲಿಡು.


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ಇಲ್ಲವಾದರೆ ಸುಮ್ಮನಿದ್ದು ಕಿವಿಗೊಡು ನಿನಗೆ ಬೋಧಿಸುವೆನು ಸುಜ್ಞಾನವನು.”


ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ಭಕ್ತನನು ಪ್ರಭು ಪ್ರತ್ಯೇಕಿಸಿಕೊಂಡನೆಂದು ತಿಳಿದುಕೊ I ನಾ ಮೊರೆಯಿಟ್ಟಾಗ ಆತ ಕಿವಿಗೊಡುವನೆಂದು ಅರಿತುಕೊ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು