Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:5 - ಕನ್ನಡ ಸತ್ಯವೇದವು C.L. Bible (BSI)

5 ಆಪತ್ಕಾಲದಲಿ ನಾನೇಕೆ ಭಯಪಡಬೇಕು? I ದ್ವೇಷಿಗಳ ದಾಳಿಗೆ ನಾನೇಕೆ ಹೆದರಬೇಕು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಪತ್ತಿನಲ್ಲಿ ಯಾಕೆ ಭಯಪಡಬೇಕು? ದ್ವೇಷಿಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಹೆದರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಪತ್ತು ಬಂದಾಗ ನಾನೇಕೆ ಭಯಪಡಬೇಕು? ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೇಡಿನ ದಿವಸಗಳಲ್ಲಿ ನನಗೆ ಒಳಸಂಚು ಮಾಡುವವರ ಅಕ್ರಮವು ನನ್ನನ್ನು ಸುತ್ತಿಕೊಳ್ಳುವಾಗ ನಾನು ಏಕೆ ಭಯಪಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:5
19 ತಿಳಿವುಗಳ ಹೋಲಿಕೆ  

‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ಈ ದಿನಗಳು ಕೆಟ್ಟ ದಿನಗಳಾಗಿರುವುದರಿಂದ ನಿಮಗಿರುವ ಸದವಕಾಶಗಳನ್ನು ಸದ್ವಿನಿಯೋಗಿಸಿಕೊಳ್ಳಿರಿ.


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


ಆಪತ್ತುಕಾಲದಲ್ಲಿ ನೀನು ಎದೆಗುಂದಿದವನಾದರೆ ನಿನ್ನ ಬಲವು ಅಸಮರ್ಪಕವಾದುದೆ.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಮುಳುಗಿಸಿಬಿಟ್ಟಿವೆ ನನ್ನ ಅಪರಾಧಗಳೆನ್ನನು I ಅಮುಕಿಬಿಟ್ಟಿವೆ ಹೊರಲಾರದ ಹೊರೆಯಂತೆನ್ನನು II


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ಸರ್ವೇಶ್ವರನ ಸಾನ್ನಿಧ್ಯವಿಲ್ಲದಿರುವ ಈ ದೇಶದಲ್ಲಿ ನಾನು ರಕ್ತ ಚೆಲ್ಲಿ ಸಾಯುವಂಥಾಗದಿರಲಿ. ಅಕಟಾ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಹೊರಟ ಬೇಟೆಗಾರನೋ ಎಂಬಂತೆ ಇಸ್ರಯೇಲರ ಅರಸ ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾರಲ್ಲಾ!” ಎಂದನು.


ಇರುವನವನು ದಾರಿಯಲ್ಲಿರುವ ವಿಷಸರ್ಪದಂತೆ, ಕುದುರೆಯ ಹಿಮ್ಮಡಿಕಚ್ಚಿ ರಾಹುತನನು ಕೆಡವುವ ಹಾವಿನಂತೆ.


“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು