Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:6 - ಕನ್ನಡ ಸತ್ಯವೇದವು C.L. Bible (BSI)

6 ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಉಬ್ಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ; ಅವರು ಬುದ್ಧಿಹೀನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ತಮ್ಮ ಸಂಪತ್ತಿನಲ್ಲಿ ಭರವಸೆಯಿಟ್ಟು, ತಮ್ಮ ಅಧಿಕ ಐಶ್ವರ್ಯಗಳಲ್ಲಿ ಜಂಭಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:6
17 ತಿಳಿವುಗಳ ಹೋಲಿಕೆ  

ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ!


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.


ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II


ಇಂಥಾ ದ್ರೋಹಿಗಳು ತಪ್ಪಿಸಿಕೊಳ್ಳಬಾರದಯ್ಯಾ I ರೌದ್ರದಿಂದಾ ಜನರನು ನೀ ಕೆಡವಿಬಿಡು ದೇವಾ II


ಅಶುಭವಾರ್ತೆಯ ಭಯಭೀತಿ ಯಾವುದೂ ಅವನಿಗಿಲ್ಲ I ಪ್ರಭುವಿನಲಿ ಭರವಸೆಯಿಟ್ಟ ಆ ಮನವು ಅಸ್ಥಿರವಲ್ಲ II


ದೃಢವಿದೆ ಅವನ ಮನ, ಎದೆಗುಂದನವನು I ಕಾಣುವನು ದುರುಳರಿಗಾಗುವ ದಂಡನೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು