Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:9 - ಕನ್ನಡ ಸತ್ಯವೇದವು C.L. Bible (BSI)

9 ಸಮಾಧಿಗಿಳಿಯದೆ ಸದಾ ಬಾಳುವ ಬಯಕೆ I ಮಾನವ ಶಕ್ತಿಗೆ ಮೀರಿದುದು ಆ ಗಳಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರಣವನ್ನು ತಪ್ಪಿಸಿಕೊಳ್ಳುವದಕ್ಕೆ ಎಷ್ಟು ಹಣಕೊಟ್ಟರೂ ಸಾಲುವದೇ ಇಲ್ಲ; ಅಂಥ ಪ್ರಯತ್ನವನ್ನು ನಿಷ್ಫಲವೆಂದು ಬಿಟ್ಟೇಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮನುಷ್ಯರು ಮರಣ ನಾಶವನ್ನು ಕಾಣದೆ, ಶಾಶ್ವತವಾಗಿ ಬದುಕುವಂತೆ ಮಾಡಲು ಯಾರಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:9
13 ತಿಳಿವುಗಳ ಹೋಲಿಕೆ  

ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ಆತನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’


ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.


ನಿಮ್ಮ ಪಿತೃಗಳು ಈಗಲೂ ಇದ್ದಾರೆಯೇ? ಪ್ರವಾದಿಗಳು ಸದಾಕಾಲ ಇರುವರೆ?


ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು