Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:10 - ಕನ್ನಡ ಸತ್ಯವೇದವು C.L. Bible (BSI)

10 ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರೇ, ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದವರು; ಆದದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವದರಿಂದ ಅವರನ್ನು ದೊಬ್ಬಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:10
41 ತಿಳಿವುಗಳ ಹೋಲಿಕೆ  

ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II


ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !


ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II


ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II


ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಕುಳಿತಿದ್ದರವರು ಕತ್ತಲಲಿ, ಕಗ್ಗತ್ತಲಲಿ I ನರಳುತ್ತಿದ್ದರು ಬಂಧಿತರಾಗಿ ಬೇಡಿಗಳಲಿ II


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ಆತನಾಳ್ವಿಕೆ ಶಕ್ತಿಯುತ, ನಿರಂತರ I ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I ಜಂಬ ಕೊಚ್ಚದಿರಲಿ ದಂಗೆಕೋರ II


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು