ಕೀರ್ತನೆಗಳು 5:11 - ಕನ್ನಡ ಸತ್ಯವೇದವು C.L. Bible (BSI)11-12 ದೊರಕುವುದು ದೇವಾ, ನಿನ್ನಾಶೀರ್ವಾದ ಸಜ್ಜನರಿಗೆ I ಕವಚವಾದಂತಿಹುದು ನಿನ್ನ ಕರುಣೆ ಅಂಥವರಿಗೆ II ಎಂದೇ ಹರ್ಷಾನಂದಗೊಳ್ವರು ನಿನ್ನನಾಶ್ರಯಿಸಿದವರೆಲ್ಲರು I ನೀ ರಕ್ಷಿಸೆ, ಉಲ್ಲಾಸಗೊಳ್ಳುವರು ನಿನ್ನ ನಾಮಪ್ರಿಯರೆಲ್ಲರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ನಿಮ್ಮನ್ನು ಆಶ್ರಯಿಸುವವರೆಲ್ಲರು ಆನಂದಿಸಲಿ; ಅವರು ಸದಾ ನಿಮ್ಮ ಆನಂದ ಗಾನವನ್ನು ಹಾಡಲಿ. ನಿಮ್ಮ ಹೆಸರನ್ನು ಪ್ರೀತಿಸುವವರು ನಿಮ್ಮಲ್ಲಿ ಆನಂದಿಸುವಂತೆ ಅವರನ್ನು ನಿಮ್ಮ ಸಂರಕ್ಷಣೆಯಿಂದ ಆವರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿ |