Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:3 - ಕನ್ನಡ ಸತ್ಯವೇದವು C.L. Bible (BSI)

3 ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವದು; ಉದಯಕಾಲದಲ್ಲಿಯೇ [ಪ್ರಾರ್ಥನೆಯನ್ನು] ಸಮರ್ಪಿಸಿ ಸದುತ್ತರವನ್ನು ಎದುರುನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ; ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ, ಎದುರುನೋಡುತ್ತಾ ಕಾದುಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:3
15 ತಿಳಿವುಗಳ ಹೋಲಿಕೆ  

ಅರುಣೋದಯದಲೆದ್ದು ಮೊರೆಯಿಟ್ಟೆನು I ನಿನ್ನ ವಾಕ್ಯದಲೆ ನಂಬಿಕೆಯಿಟ್ಟೆನು II


ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು.


ಶತ್ರುಗಳನು ಸದೆಬಡಿವೆವು ನಿನ್ನ ಬೆಂಬಲದಿಂದ I ಎದುರಾಳಿಯನು ತುಳಿವೆವು ನಿನ್ನ ಆವೇಶದಿಂದ II


ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II


ನಿನ್ನ ಮಂದಿರದಲಿ ವಾಸಿಸುವವರು ಧನ್ಯರು I ನಿರಂತರವು ನಿನ್ನ ಗುಣಗಾನ ಮಾಡುವರವರು II


ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II


ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II


ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು