Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:6 - ಕನ್ನಡ ಸತ್ಯವೇದವು C.L. Bible (BSI)

6 ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯಮಾಡುವವರೂ, ಕಪಟಿಗಳೂ ನಿನಗೆ ಹೇಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:6
13 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.


“ಸುನ್ನತಿ ಇಲ್ಲದವರಿಗೆ ನಮ್ಮ ತಂಗಿಯನ್ನು ಕೊಡುವುದಕ್ಕೆ ಆಗುವುದಿಲ್ಲ. ಹಾಗೆ ಕೊಡುವುದು ನಮಗೆ ಅವಮಾನಕರ.


ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು