Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:7 - ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:7
27 ತಿಳಿವುಗಳ ಹೋಲಿಕೆ  

ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಹೋಗೋಣ ಬನ್ನಿರಿ ಆತನ ಮಂದಿರಕೆ I ಅಡ್ಡಬೀಳೋಣ ಆತನ ಪಾದಪೀಠಕೆ II


ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.


ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II


ನಾನಾದರೋ ಮೊರೆಯಿಡುವೆ ದೇವರಿಗೆ I ರಕ್ಷಣೆ ನೀಡದಿರನು ಪ್ರಭು ನನಗೆ II


ನಾನಾದರೋ ದೇಗುಲದಲಿ ಬೆಳೆದಿಹ ಎಣ್ಣೆಮರದಂತಿರುವೆನು I ದೇವರ ಸ್ಥಿರಪ್ರೀತಿಯನು ಯುಗಾಂತರಕು ನಂಬಿಕೊಂಡಿರುವೆನು II


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


“ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II


ಮೋಸಗಾರನು ವಾಸಮಾಡನು ನನ್ನ ನಿವಾಸದಲಿ I ಸುಳ್ಳುಗಾರನು ನಿಲ್ಲಲಾರನು ನನ್ನ ಸಮ್ಮುಖದಲಿ II


ಸರ್ವೇಶ್ವರ ಹಗೆಮಾಡುವಂಥಹವು ಆರು: ಆತ ಖಂಡನೆ ಮಾಡುವಂಥಹವು ಏಳು: ಅಹಂಕಾರ ದೃಷ್ಟಿ, ಕಪಟವಾಡುವ ನಾಲಿಗೆ, ನಿರಪರಾಧಿಯನ್ನು ಕೊಲೆಮಾಡುವ ಕೈ, ದುರಾಲೋಚನೆಯನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತವಕಪಡುವ ಕಾಲು, ಅಸತ್ಯವನ್ನು ಉಸುರುವ ಸುಳ್ಳುಸಾಕ್ಷಿ, ಸೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು