Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:8 - ಕನ್ನಡ ಸತ್ಯವೇದವು C.L. Bible (BSI)

8 ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ವಿರೋಧಿಗಳು ನನ್ನ ಕೇಡನ್ನೇ ಹಾರೈಸುತ್ತಿರುವದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡಿಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ, ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ನನ್ನ ವಿರೋಧಿಗಳ ನಿಮಿತ್ತ ನಿಮ್ಮ ನೀತಿಯಲ್ಲಿ ನನ್ನನ್ನು ನಡೆಸಿರಿ; ನಿಮ್ಮ ಮಾರ್ಗವನ್ನು ನನ್ನ ಮುಂದೆ ನೇರವಾಗಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:8
16 ತಿಳಿವುಗಳ ಹೋಲಿಕೆ  

ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ನಿನ್ನ ಕಣ್ಣುಗಳು ನೇರವಾಗಿ ನಾಟಿರಲಿ, ಕಣ್ಣು ರೆಪ್ಪೆಗಳು ಮುಂದಾಗಿ ತೆರೆದಿರಲಿ.


ಪ್ರಭು, ನಿನ್ನಚಲ ಪ್ರೀತಿಯಿಂದ ಜಗ ತುಂಬಿದೆ I ನೀಡೆನಗೆ ಪ್ರಭು, ನಿನ್ನ ನಿಬಂಧನೆಗಳ ಬೋಧೆ II


“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.


ಪ್ರೀತಿಯಿಂದ ನೆರವಾಗುವನು ದೇವನೆನಗೆ I ಶತ್ರುಗಳಿಗಾದ ಸೋಲನು ತೋರಿಸುವನೆನಗೆ II


ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ I ನಿನ್ನ ಶರಣನಾದೆ, ನನಗಾಗದಿರಲಿ ತಾತ್ಸಾರ II


ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ.


ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಸುತ್ತುವರಿಯೆ ಜಲರಾಶಿ, ಉಸಿರು ಕಟ್ಟಿದಂತಾಯ್ತು ಸಾಗರವು ಸಂಪೂರ್ಣವಾಗೆನ್ನ ಆವರಿಸಿತು; ಎನ್ನ ಶಿರವನು ಜೊಂಡು ಸುತ್ತುಗಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು