Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:9 - ಕನ್ನಡ ಸತ್ಯವೇದವು C.L. Bible (BSI)

9 ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತಾಡಿದರೂ ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:9
25 ತಿಳಿವುಗಳ ಹೋಲಿಕೆ  

ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.


ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು.


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


ಆಗ ಯೇಸು, “ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.


ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II


ನನಗಾದ ನಿಂದೆ, ಅಪಮಾನ, ಲಜ್ಜೆ ನಿನಗೆ ತಿಳಿದಿದೆಯಯ್ಯಾ I ನನ್ನ ವೈರಿ ವಿರೋಧಿಗಳು ನಿನಗೆ ಮರೆಯಾಗಿಲ್ಲವಯ್ಯಾ II


ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು